ಶುಕ್ರವಾರ, ಆಗಸ್ಟ್ 6, 2021
21 °C

ಖಾಲಿ ಇಲ್ಲದ ಸಿಎಂ ಗಾದಿಗಾಗಿ ಕಾಂಗ್ರೆಸ್‌ ನಾಯಕರ ಕಾದಾಟ: ಬಿಜೆಪಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಖಾಲಿ‌ ಇಲ್ಲದ ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡೆಸುತ್ತಿರುವ ಕಾದಾಟವು ಕಾಂಗ್ರೆಸ್‌ ಪಕ್ಷದ ಅನೇಕರನ್ನು ಕಂಗಾಲಾಗಿಸುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿಯು, 'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ದೆಹಲಿ ಭೇಟಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಾಹುಲ್ ಭೇಟಿಗೆ ಸಮಯ ಕೇಳಿದ್ದಾರೆ. ಖಾಲಿ‌ ಇಲ್ಲದ ಮುಖ್ಯಮಂತ್ರಿ ಗಾದಿಗಾಗಿ ಈ ಇಬ್ಬರು ನಾಯಕರು ನಡೆಸುತ್ತಿರುವ ಕಾದಾಟ ಕಾಂಗ್ರೆಸ್‌ ಪಕ್ಷದ ಅನೇಕ ಖಾಲಿ ತಲೆಗಳನ್ನು ಕಂಗಾಲಾಗಿಸುತ್ತಿದೆ' ಎಂದು ವಾಗ್ದಾಳಿ ನಡೆಸಿದೆ.

'ವಲಸೆ ನಾಯಕ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್‌ ಪಕ್ಷದಲ್ಲಿ ಒಳಜಗಳ ಇಲ್ಲವೆಂದಾದರೆ ಡಿ.ಕೆ.ಶಿವಕುಮಾರ್‌ ಅವರು ರಾಹುಲ್ ಮುಂದೆ ಏಕೆ ಗೋಳು ತೋಡಿಕೊಳ್ಳುತ್ತಿದ್ದರು? ಉಸ್ತುವಾರಿ ಸುರ್ಜೇವಾಲಾರನ್ನು ಎರಡು ಬಾರಿ ಭೇಟಿ ಮಾಡಿ ನಿಮ್ಮ‌ ವಿರುದ್ಧ ದೂರು ನೀಡಿದ್ದೇಕೆ? ತಾನು ಕಳ್ಳ, ಪರರ ನಂಬ ಎಂಬಂತಾಗಿದೆ ಕಾಂಗ್ರೆಸ್ ಸ್ಥಿತಿ' ಎಂದು ಬಿಜೆಪಿ ಟೀಕಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು