ಬುಧವಾರ, ಡಿಸೆಂಬರ್ 1, 2021
26 °C

ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಇಲ್ಲವೇ: ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಖನ್‌ ಬಂಡಾಯದ ಹಿನ್ನೆಲೆಯಲ್ಲಿ ಬಾಲಚಂದ್ರ ಹಾಗೂ ರಮೇಶ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಧೈರ್ಯ ಬಿಜೆಪಿಗೆ ಇದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಈ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ಮಂಥರ್ ಗೌಡ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿರುವುದಕ್ಕೆ ಎ.ಮಂಜು ವಿರುದ್ಧ ಬಿಜೆಪಿಯು ಶಿಸ್ತು ಕ್ರಮ ಕೈಗೊಂಡಿದೆ. ಲಖನ್ ಜಾರಕಿಹೊಳಿ ಬಂಡಾಯದ ಹಿನ್ನೆಲೆಯಲ್ಲಿ ಬಾಲಚಂದ್ರ ಹಾಗೂ ರಮೇಶ ಜಾರಕಿಹೊಳಿ ವಿರುದ್ಧವೂ ಇದೇ ಶಿಸ್ತು ಕ್ರಮ ಕೈಗೊಳ್ಳುವ ಧೈರ್ಯ ಬಿಜೆಪಿಗೆ ಇದೆಯೇ ಅಥವಾ ಉತ್ತರನ ಪುರುಷ ಒಲೆಯ ಮುಂದೆ ಮಾತ್ರವೇ?‘ ಎಂದು ಟ್ವೀಟಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಬಿಜೆಪಿಗೆ ಬೆಂಬಲ ನೀಡಿದ್ದ ಲಖನ್‌ ಜಾರಕಿಹೊಳಿ  ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಲಖನ್‌ಗೆ ರಮೇಶ ಮತ್ತು ಬಾಲಚಂದ್ರ ಬೆಂಬಲ ನೀಡುತ್ತಿದ್ದಾರೆ ಎಂಬ ಚರ್ಚೆಗಳೂ ಮುನ್ನೆಲೆಗೆ ಬಂದಿವೆ. 

ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದು, ನಂತರ ಬಿಜೆಪಿ ಸೇರಿರುವ ಹಾಸನದ ಎ. ಮಂಜು ಅವರ ಮಗ ಡಾ. ಮಂಥರ್‌ ಗೌಡ ಅವರಿಗೆ ಕೊಡಗು ಕ್ಷೇತ್ರದ ಟಿಕೆಟ್‌ ದೊರಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು