ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಹಾನಗಲ್ ಕ್ಷೇತ್ರಕ್ಕೆ ಇದೇ 7ರಂದು ಹಾಗೂ ಸಿಂದಗಿಯಲ್ಲಿ 8ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ಎರಡೂ ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ಸ್ಥಳೀಯ ನಾಯಕರ ಜತೆ ನಾವು ಚರ್ಚಿಸಿದ್ದೇವೆ. ನಮ್ಮ ಅಭಿಪ್ರಾಯವನ್ನು ವರಿಷ್ಠರಿಗೆ ತಿಳಿಸಿದ್ದೇವೆ’ ಎಂದರು.

‘7ರಂದು ನಾನು, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಚ್.ಕೆ. ಪಾಟೀಲ ಮತ್ತು ಸ್ಥಳೀಯ ನಾಯಕರು ಹಾನಗಲ್ಗೆ ತೆರಳಲಿದ್ದೇವೆ. ಮರುದಿನ ಸಿಂದಗಿಗೆ ಹೋಗುತ್ತೇವೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವ ವಿಶ್ವಾಸವಿದೆ’ ಎಂದರು.

ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅದು ಅವರ ಪಕ್ಷದ ರಾಜಕೀಯ ತಂತ್ರಗಾರಿಕೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದು ಶಿವಕುಮಾರ್ ಹೇಳಿದರು.

ಪರಮೇಶ್ವರ ಅವರು ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, 'ಯಾರು ಯಾವ ಆಸೆ ಬೇಕಾದರೂ ವ್ಯಕ್ತಪಡಿಸಬಹುದು. ಅದರಲ್ಲಿ ತಪ್ಪಿಲ್ಲ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಕಾರ್ಯವಹಿಸಿರುವ ಅವರಿಗೆ ಏನು ಹೇಳಬೇಕು, ಏನು ಹೇಳಬಾರದು ಎಂಬ ಅರಿವಿದೆ. ಮೊದಲು ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು’ ಎಂದರು.

‘ಬಿಜೆಪಿ ಗೆಲ್ಲಿಸಲು ಜೆಡಿಎಸ್ನಿಂದ ಮುಸ್ಲಿಂ ಅಭ್ಯರ್ಥಿ’

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಜೆಡಿಎಸ್ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ’ ಎಂದು ಪ್ರಶ್ನಿಸಿದರು.

‘ಹಾನಗಲ್ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಅವರು ಹೇಳಿದರು.

‘ಪರಮೇಶ್ವರ ಹೇಳಿಕೆಯ ಬಗ್ಗೆ ನಾನು ಏನೂ ಮಾತನಾಡಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತೊ ಅದಕ್ಕೆ ಬದ್ಧ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.