ಮಂಗಳವಾರ, ಮಾರ್ಚ್ 2, 2021
23 °C

ಕಾಂಗ್ರೆಸ್‌ ರಾಜಭವನ ಚಲೊ: ಡಿಕೆಶಿ, ಸಿದ್ದರಾಮಯ್ಯ ಪೊಲೀಸ್‌ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರನ್ನು ಮಾರ್ಗ ಮಧ್ಯದಲ್ಲಿಯೇ ಪೊಲೀಸರು ತಡೆದು ವಶಕ್ಕೆ ಪಡೆದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಕಾಂಗ್ರೆಸ್‌ ಶಾಸಕಾಂಕಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಹಲವು ಪ್ರತಿಭನಾನಿರತರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದು, ಬಿಎಂಟಿಸಿ ಬಸ್​ನಲ್ಲಿ ಕರೆದೊಯ್ದರು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಫ್ರೀಡಂ ಪಾರ್ಕ್​ನಲ್ಲಿ ಸಮಾವೇಶಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು. ಈ ವೇಳೆ ಪೊಲೀಸರು ತಡೆಯೊಡ್ಡಿದರು.

ಜೈಲಿಗೆ ಹೋಗಲು ತಯಾರು: ಫ್ರೀಡಂ ಪಾರ್ಕ್​ನಲ್ಲಿ ನಡೆದ​ ಸಮಾವೇಶದಲ್ಲಿ ಮಾತನಾಡಿ ಡಿ.ಕೆ. ಶಿವಕುಮಾರ್, ‘ಮೂರು ಮರಣಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದೀರಿ. ಪ್ರಧಾನಮಂತ್ರಿ ಗಮನ ಸೆಳೆಯಲು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ರೈತರಿಗೆ ಬೆಂಭಲು ವ್ಯಕ್ತಪಡಿಸಿ ಈ ಹೋರಾಟ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ, ಇತಿಹಾಸ ಪುಟದಲ್ಲಿ ಇಲ್ಲಿರುವವರು ಸೇರುತ್ತಿದ್ದೀರಿ’ ಎಂದರು.

ಕುಸಿದು ಬಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್‌
ರಾಜಭವನ ಮುತ್ತಿಗೆಗೆ ಹಾಕಲು ಹೊರಟ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರನ್ನು ಮಹಾರಾಣಿ ಕಾಲೇಜು ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ತಡೆದ ಪೋಲಿಸರು ತಡೆದರು. ಈ ವೇಳೆ, ಪೊಲೀಸರು ಮತ್ತು ಶಾಸಕಿಯರಾದ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್ ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಅಂಜಲಿ ನಿಂಬಾಳ್ಕರ್ ಕುಸಿದು ಬಿದ್ದರು. ಈ ವೇಳೆ, ಪೊಲೀಸರು ಕುಡಿಯಲು ನೀರಿ ಕೊಟ್ಟು ಉಪಚರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು