ಬುಧವಾರ, ಆಗಸ್ಟ್ 10, 2022
25 °C

ಕಾಂಗ್ರೆಸ್ ಸಿಎಲ್‌ಪಿ ಸಭೆ ಜುಲೈ 3ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಜುಲೈ 3ರಂದು ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆಯಲಿದೆ.

‘ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಮತ್ತು ಇತರ ಬೆಂಬಲಿತ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸಿದ್ದಾರೆ. ಅವರನ್ನು ಬೆಂಬಲಿಸುವ ಕುರಿತು ಸಮಾಲೋಚನೆ ನಡೆಸಲು ಈ ಸಭೆ ನಡೆಯಲಿದೆ’ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಂ ತಿಳಿಸಿದ್ದಾರೆ.

ರಾಷ್ಟ್ರಪತಿ ಆಯ್ಕೆಗೆ ನಡೆಯಲಿರುವ ಚುನಾವಣೆಯ ಜೊತೆಗೆ, ಪಕ್ಷ ಸಂಘಟನೆ, ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ವಿದ್ಯಾರ್ಥಿ ಬಸ್‌ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್‌, ಕಾನೂನು ಹಾಗೂ ಸ್ನಾತ ಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ರಿಯಾಯಿತಿ ಬಸ್‌ ಪಾಸ್ ಅವಧಿಯನ್ನು ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ.

‘ಪರೀಕ್ಷೆಗಳು ನಡೆಯುತ್ತಿದ್ದರೆ ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ–ಆಗಸ್ಟ್‌) ನಿಗದಿತ ಮೊತ್ತ ಪಾವತಿಸಿ ರಸೀದಿ ಪಡೆಯಬೇಕು. ಹಳೆಯ ಪಾಸ್ ಮತ್ತು ರಸೀದಿತೋರಿಸಿ ಪ್ರಯಾಣಿಸಬಹುದು’ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪ
ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು