ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಮಾಹಿತಿ ಕಳವು ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು

Last Updated 19 ನವೆಂಬರ್ 2022, 9:51 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶನಿವಾರ ದೂರು ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕರಾದ ದಿನೇಶ್ ಗುಂಡೂರಾವ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಮುಖಂಡ ಎಚ್.ಎಂ. ರೇವಣ್ಣ ನಿಯೋಗದಲ್ಲಿದ್ದರು.

'ಚಿಲುಮೆ ಟ್ರಸ್ಟ್ ಹೆಸರಿನಲ್ಲಿ ಮತದಾರರ ಜಾಗೃತಿ ಅಭಿಯಾನಕ್ಕೆ ಅನುಮತಿ ಪಡೆದುಕೊಂಡು ಮತದಾರರ ಮಾಹಿತಿ ಕಳವು ಮಾಡಲಾಗಿದೆ. ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೆಸರುಗಳನ್ನು ಕಿತ್ತು ಹಾಕಲಾಗಿದೆ' ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT