ಬುಧವಾರ, ಏಪ್ರಿಲ್ 14, 2021
25 °C

ಕಲಾಪ ಸಲಹಾ ಸಮಿತಿ ಸಭೆಗೆ ಕಾಂಗ್ರೆಸ್‌ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ವಿಧಾನ ಸಭೆ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್‌ ನಿರ್ಧರಿಸಿದೆ.

ಮಂಗಳವಾರ (ಮಾರ್ಚ್‌ 9) ಬೆಳಿಗ್ಗೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಜೆಟ್‌ ಮಂಡಿಸಿದ್ದು, ಮಂಗಳವಾರದಿಂದ ಬಜೆಟ್‌ ಮೇಲೆ ಚರ್ಚೆ ನಡೆಯಲಿದೆ. ಆದರೆ, ಬಜೆಟ್‌ ಮಂಡನೆಯ ಆರಂಭವಾಗುತ್ತಿದ್ದಂತೆ, ‘ಅನೈತಿಕ ಸರ್ಕಾರ ಬಜೆಟ್‌ ಮಂಡಿಸುತ್ತಿದೆ’ ಎಂದು ಪ್ರತಿಭಟಿಸಿ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ನಡೆಸಿದ್ದರು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕರ ಸಭೆ ರಾತ್ರಿ ನಡೆದಿತ್ತು. ಈ ಸಭೆಯಲ್ಲಿ ಕಲಾಪ ಸಲಹಾ ಸಮಿತಿ ಸಭೆಗೆ ಗೈರಾಗಲು ನಿರ್ಧರಿಸಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು