ಬೆಂಗಳೂರು: ಬೆಲೆ ಏರಿಕೆ, ಕುಸಿದಿರುವ ಕಾನೂನು ಸುವ್ಯವಸ್ಥೆ, ಅಧೋಗತಿಗೆ ಇಳಿದಿರುವ ಆರ್ಥಿಕ ಪರಿಸ್ಥಿತಿ ಮತ್ತಿತರ ವಿಷಯಗಳನ್ನು ಅಸ್ತ್ರವಾಗಿ ಮಾಡಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಿರ್ಧರಿಸಿದೆ.
ಸದನದಲ್ಲಿ ಚರ್ಚೆಗೆ ಎತ್ತಿಕೊಳ್ಳಬೇಕಾದ ವಿಷಯಗಳ ಬಗ್ಗೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಮಾಲೋಚನೆ ನಡೆಯಿತು.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿತ್ಯ ವರದಿಯಾಗುತ್ತಿದೆ. ಮೈಸೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವೇ ಇದಕ್ಕೆ ಸಾಕ್ಷಿ. ಭ್ರಷ್ಟಾಚಾರ ಮಿತಿ ಮೀರಿದೆ. ಜನರ ನೋವಿಗೆ ಸದನ
ದಲ್ಲಿ ಧ್ವನಿಯಾಗಬೇಕು' ಎಂದು ಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ತಿಳಿಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರ್. ಧ್ರುವ ನಾರಾಯಣ, ಮುಖಂಡರಾದ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಕೆ.ಆರ್. ರಮೇಶ್ ಕುಮಾರ್ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.