ಭಾನುವಾರ, ನವೆಂಬರ್ 1, 2020
19 °C

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಸದನ  ಹಾಗೂ ಜನರ ವಿಶ್ವಾಸ ಕಳೆದುಕೊಂಡಿದೆ.‌ ಹೀಗಾಗಿ, ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಅವರು, ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆ  ಎಂದು ದೂರಿದರು.

ಯಡಿಯೂರಪ್ಪ ನೇತೃತ್ವದ‌ ಸರ್ಕಾರದಲ್ಲಿ ಜನರು  ವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ವರ್ಗಾವಣೆ, ಅನುದಾನ ವಿಚಾರದಲ್ಲಿಯೂ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಯಲ್ಲಿದೆ ಎಂದರು.

ಸರ್ಕಾರ  ಜನ ವಿರೋಧಿ ಕಾನೂನು ಜಾರಿಗೊಳಿಸುತ್ತಿದೆ. ರಾಜ್ಯ ಸಾಲಗಾರ ರಾಜ್ಯವಾಗುತ್ತಿದೆ.  ಒಂದು ಲಕ್ಷದ ಒಂದು ಸಾವಿರ ಕೋಟಿ‌ ರೂಪಾಯಿಯ ಸಾಲ ಮಾಡಿದೆ ಎಂದೂ ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು