ಕೋವಿಡ್ ಲಸಿಕೆ ಹಾಕಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಮತ್ತು ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದ್ದ ಅವರು, ಅಲ್ಲಿನ ಸಿಬ್ಬಂದಿ ಮತ್ತು ವೈದ್ಯರಿಂದ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಲಸಿಕೆ ಪಡೆದುಕೊಂಡ ಬಳಿಕ ವೈದ್ಯರು ಸಿದ್ದರಾಮಯ್ಯ ಅವರಿಗೆ ಸೂಚನೆಗಳನ್ನು ನೀಡಿದ್ದಾರೆ.
ಲಸಿಕೆ ಪಡೆದುಕೊಂಡ ಸಂದರ್ಭದಲ್ಲಿ ಸೂಜಿ ಚುಚ್ಚಿರುವುದು ಗೊತ್ತೇ ಆಗಲಿಲ್ಲ ಎಂದು ಸಿದ್ದರಾಮಯ್ಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಜತೆ ನಗೆಚಟಾಕಿ ಹಾರಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.