ಕಾಂಗ್ರೆಸ್ ಪಕ್ಷ ಬಿಟ್ಟವರನ್ನು ಮತ್ತೆ ಕರೆ ತರುತ್ತೇವೆ: ರಾಮಲಿಂಗಾರೆಡ್ಡಿ

ಬೆಂಗಳೂರು: ‘ಕೆಲವರು ನಾನಾ ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಹೋಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ರಾಮಲಿಂಗಾ ರೆಡ್ಡಿ ಹೇಳಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ವೀರಪ್ಪ ಮೊಯಿಲಿ ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ನಾನು ಸಚಿವನಾಗಿದ್ದೇನೆ. ಬೆಂಗಳೂರನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದೇನೆ’ ಎಂದರು.
ಸೌಮ್ಯಾ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ‘ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಕೈಗೊಂಬೆಯಾಗಿದೆ. ಠಾಣೆಗೆ ದೂರು ಕೊಡಲು ಹೋದರು ತೆಗೆದುಕೊಳ್ಳುವುದಿಲ್ಲವೆಂದರೆ ಏನರ್ಥ’ ಎಂದು ಪ್ರಶ್ನಿಸಿದರು.
ಇದನ್ನೂ ಓದಿ... ಸೌಮ್ಯಾ ರೆಡ್ಡಿ ವಿರುದ್ಧ ಎಫ್‌ಐಆರ್: ಇದು ವ್ಯವಸ್ಥಿತ ಸಂಚು ಎಂದ ಡಿಕೆಶಿ
ರಾಜ್ಯ ಕೇಸರಿಮಯವಾಗುತ್ತಿದೆಯಾ. ಘಟನೆ ನಡೆದ 48 ಗಂಟೆಗಳ ಬಳಿಕ ಅನೇಕರು ದೂರು ನೀಡಲು ಮುಂದಾಗಿದ್ದರು. ಮಹಿಳಾ ಮೋರ್ಚಾದವರು ದೂರು ನೀಡಲು ಬಂದರೂ ದೂರು ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು.
ಹೋಮ್ ಗಾರ್ಡ್ ಮೇಲೆ ಕೂಡ ಹಲ್ಲೆ ಮಾಡಿಲ್ಲ ಎಂದು ಸೌಮ್ಯಾ ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ವಿಚಾರಣೆ ನಡೆಯುತ್ತಿದೆ. ನನ್ನ ಮಗಳು ಸೌಮ್ಯಾ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ ಎಂದರು.
‘ಸೌಮ್ಯಾ ಮತ್ತು ಅಂಜಲಿ ನಿಂಬಾಳ್ಕರ್ ಇಬ್ಬರೂ ಶಾಸಕಿಯರು. ಇಬ್ಬರೂ ಕೆಳಗೆ ಬಿದ್ದ ಕಾರಣ ಗಾಯಗಳಾಗಿವೆ. ಅಂಜಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ನೆಲದಲ್ಲಿ ಇಬ್ಬರೂ ಬಿದ್ದಿದ್ದಾರೆ. ಹಾಗಾದರೆ ಅವರು ಹೇಗೆ ಬಿದ್ದರು. ಇಬ್ಬರಿಗೂ ಗಾಯಗಳು ಹೇಗಾಯಿತು. ಈ ಬಗ್ಗೆ ಮುಖ್ಯಮಂತ್ರಿಯಾಗಲಿ, ಗೃಹ ಮಂತ್ರಿಯಾಗಲಿ ಬಾಯಿ ಬಿಡುತ್ತಿಲ್ಲ’ ಎಂದೂ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.