ಶನಿವಾರ, ಆಗಸ್ಟ್ 13, 2022
27 °C

ಒಂದೇ ಕಾರ್ಯಕ್ರಮ: ಪ್ರತ್ಯೇಕ ವಿಮಾನದಲ್ಲಿ ಬಂದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತ್ಯೇಕ ವಿಮಾನದಲ್ಲಿ ಬಂದರು.

ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ್ ಅವರ ಪುತ್ರಿಯ ವಿವಾಹ ಕಾರ್ಯಕ್ರಮ ಸೋಮವಾರ ಸಿಂಧನೂರಿನಲ್ಲಿ‌ ಆಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಸಮೀಪದ ಬಸಾಪುರ ಖಾಸಗಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ಬೇರೆ ಬೇರೆಯಾಗಿ ಬಂದರು. 

ಮೊದಲು ಸಿದ್ದರಾಮಯ್ಯ ಬಂದು ರಸ್ತೆ ಮಾರ್ಗದ ಮೂಲಕ ಸಿಂಧನೂರಿಗೆ ತೆರಳಿದರು. ಅರ್ಧ ಗಂಟೆ ಬಳಿಕ ಶಿವಕುಮಾರ್ ಬಂದರು. ನಾಯಕರು ಪ್ರತ್ಯೇಕವಾಗಿ ಬಂದಿದ್ದು ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ಹುಟ್ಟು ಹಾಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು