ಶನಿವಾರ, ಸೆಪ್ಟೆಂಬರ್ 18, 2021
30 °C

ಶಾಸಕರು ಕ್ಷೇತ್ರ ಮರೆತು ಸಚಿವ ಸ್ಥಾನಕ್ಕಾಗಿ ಕಚ್ಚಾಡುತ್ತಿದ್ದಾರೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: 'ಪ್ರವಾಹ ಸಂದರ್ಭದಲ್ಲೂ ಬಿಜೆಪಿ ಶಾಸಕರು ತಮ್ಮ ಕ್ಷೇತ್ರ ಮರೆತು ಸಚಿವ ಸ್ಥಾನಕ್ಕಾಗಿ ಬೆಂಗಳೂರಲ್ಲಿ ಕೂತು ಕಚ್ಚಾಡುತ್ತಿದ್ದಾರೆ' ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಹದ ಈ ತುರ್ತು ಸಂದರ್ಭದಲ್ಲಿ 'ಮುಖ್ಯಮಂತ್ರಿಯೊಬ್ಬರೇ ಎಲ್ಲವನ್ನು ನಿಭಾಯಿಸಲು ಸಾಧ್ಯವಿಲ್ಲ. ಕೂಡಲೇ ಸಚಿವ ಸಂಪುಟ ರಚನೆಯಾಗಬೇಕು' ಎಂದು ಹೇಳಿದರು.

'ಕೋವಿಡ್ ಮೊದಲ ಹಾಗೂ ಎರಡನೇ ಅಲೆ ನಿಯಂತ್ರಿಸುವಲ್ಲೂ ಬಿಜೆಪಿ ಸರ್ಕಾರ ವಿಫಲವಾಗಿದೆ. ಇದೀಗ ಮೂರನೆ ಅಲೆಯ ಭೀತಿ ಆವರಿಸಿದೆ. ಅದನ್ನು ನಿಯಂತ್ರಿಸಲಾದರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದ ಗಡಿ ಪ್ರದೇಶಗಳಲ್ಲಿ ತಪಾಸಣೆ ಹೆಚ್ಚಿಸಬೇಕು. ಕೋವಿಡ್ ನೆಗೆಟಿವ್ ವರದಿ ತಂದವರನ್ನು ಮಾತ್ರ ಒಳಗೆ ಬಿಡಬೇಕು' ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು