ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ವತ್ಥ ನಾರಾಯಣ ಹೇಳಿಕೆ ಸರಿಯೇ? ಮೋದಿ, ಅಮಿತ್ ಶಾ ಉತ್ತರಿಸಲಿ: ಸಿದ್ದರಾಮಯ್ಯ

Last Updated 16 ಫೆಬ್ರುವರಿ 2023, 7:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಿದ್ದರಾಮಯ್ಯ ಅವರನ್ನು ಮುಗಿಸಿ ಎಂದರೆ ಏನರ್ಥ? ಜನರನ್ನು ರಕ್ಷಿಸಬೇಕಾದ ಸಚಿವರೇ (ಅಶ್ವತ್ಥ ನಾರಾಯಣ) ಇಂತಹ ಹೇಳಿದ್ದು ಸರೀನಾ? ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಇದು ಸರೀನಾ ಎನ್ನುವುದನ್ನು ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಬಿಜೆಪಿಯದ್ದು ಹೊಡಿ, ಬಡಿ, ಕಡಿ ಸಂಸ್ಕೃತಿ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದವರು ಇವರು. ಆರ್‌.ಎಸ್.ಎಸ್.ನವರು ಈ ರೀತಿ ಹೇಳಿಕೆ ಕೊಡಿಸಿದ್ದಾರೆ ಎಂದರು.

ರಾಜ್ಯದಲ್ಲಿ ರೈತರು, ಬಡವರು, ದಲಿತರು, ಅಲ್ಪಸಂಖ್ಯಾತರ ಬಗ್ಗೆ ಚರ್ಚೆಯಾಗಬೇಕು. ಅದನ್ನು ಬಿಟ್ಟು ಹೊಡಿ, ಬಡಿ, ಕಡಿ ಎನ್ನುತ್ತಿದ್ದಾರೆ ಎಂದು ಹೇಳಿದರು.

ವಜಾಗೊಳಿಸಿ: ಇಂತಹ ಹೇಳಿಕೆ ನೀಡಿದ ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಸಚಿವ ಸಂಪುಟದಿಂದ ರಾಜ್ಯಪಾಲರು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಕರಣ ದಾಖಲಿಸಿಕೊಳ್ಳಲಿ: ನಾನು ದೂರು ಕೊಡಲ್ಲ. ಸಚಿವರ ವಿರುದ್ಧ ಪೊಲೀಸರೇ ಸ್ವಯಂ‌ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT