ಮಂಗಳವಾರ, ಜೂನ್ 15, 2021
23 °C

ರಾಜ್ಯ ರಾಜಕಾರಣವೇ ಸಾಕು: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರ ರಾಜಕಾರಣ ಪ್ರವೇಶಿಸುವ ಬಯಕೆ ಇಲ್ಲ. ನನ್ನ ರಾಜಕಾರಣ ಏನೇ ಇದ್ದರೂ ಕರ್ನಾಟಕಕ್ಕೆ ಸೀಮಿತ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಅನೌಪಚಾರಿಕವಾಗಿ ಮಾತನಾಡಿದ ಅವರು, ‘ಇಲ್ಲೇ ಉತ್ತಮ ರಾಜಕಾರಣ ಮಾಡಲು ಬಿಟ್ಟರೆ ಸಾಕು’ ಎಂದು ತಿಳಿಸಿದರು.

ಇತ್ತೀಚೆಗೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ‘ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು’ ಎಂದು ಹೇಳಿಕೆ ನೀಡಿದ್ದರು. ಇದು, ರಾಜಕೀಯ ವಲಯದಲ್ಲಿ  ಚರ್ಚೆಗೆ ಗ್ರಾಸವಾಗಿತ್ತು. ಇದಕ್ಕೆ ಸಿದ್ದರಾಮಯ್ಯ ‘ಅವರು ಏಕೆ ಹೇಳಿದ್ದಾರೋ ಗೊತ್ತಿಲ್ಲ. ನನಗೆ ರಾಷ್ಟ್ರ ರಾಜಕಾರಣ ಆಸಕ್ತಿ ಇಲ್ಲ ’ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು