ಬೆಂಗಳೂರು: ‘ಯಾರು... ಯಾವ ಕುಮಾರಸ್ವಾಮಿ ? ನಾನು ಅವರ ಬಗ್ಗೆ ಮಾತನಾಡಲ್ಲ ರೀ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಆಗುವ ಹುಚ್ಚು. ಅದಕ್ಕೆ ಮುಸ್ಲಿಮರನ್ನು ಓಲೈಸುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ನೋ ರಿಯಾಕ್ಷನ್ ಟು ಮಿಸ್ಟರ್ ಕುಮಾರಸ್ವಾಮಿ’ ಎಂದರು.

‘ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡಿಲ್ಲ. ಅವರು ರಾಜಕೀಯ ಪಕ್ಷದ ನಾಯಕರು. ನನ್ನ ಪಾಡಿಗೆ ನಾನು ಮಾತನಾಡುತ್ತೇನೆ’ ಎಂದರು.

ಶಾಸಕ ಜಮೀರ್ ಅಹ್ಮದ್, ‘ಇಬ್ರಾಹಿಂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ವಿಶ್ವಾಸ ಇದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಅಲ್ಪಸಂಖ್ಯಾತರನ್ನು ಮಾಡುತ್ತಾರೆ ಎಂದು ನಾವು ನಿರೀಕ್ಷೆ ಇಟ್ಟುಕೊಂಡಿದ್ದೆವು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.