ಶುಕ್ರವಾರ, ಫೆಬ್ರವರಿ 3, 2023
23 °C

ಬಿಜೆಪಿಯವರು ಪಕ್ಕದಲ್ಲಿದ್ದರೆ ಸೈಲೆಂಟ್ ಸುನೀಲನ ಬಂಧಿಸಲು ಸಾಧ್ಯವೇ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಮುಖಂಡರ ಜೊತೆ ಇದ್ದರೆ ಅವನನ್ನು ಅರೆಸ್ಟ್ ಮಾಡುವ ಧೈರ್ಯ ಸಿಸಿಬಿ ಪೊಲೀಸರಿಗೆ ಹೇಗೆ ಬರುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವನ್ಯಾವನೋ ಒಬ್ಬ ಸುನೀಲನ ಜೊತೆ ಸೂರ್ಯ, ಮೋಹನ್ ಅವರೆಲ್ಲಾ ಹೋಗಿದ್ದಾರೆ‌. ಡಕಾಯಿತಿ, ಕೊಲೆ ಕೇಸ್‌ನಲ್ಲಿ ಇದ್ದವನ ಜೊತೆ ಬಿಜೆಪಿ ಮುಖಂಡರೆಲ್ಲಾ ಸೇರಿಕೊಂಡಿದ್ದರು. ಇವರು ನೀತಿ ಹೇಳೋದು. ಬದನೆಕಾಯಿ ತಿನ್ನೋಕಾ' ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಜೆಪಿ ಸಂಸದರ ಜೊತೆ ರೌಡಿ ಸುನೀಲ್ ಪ್ರತ್ಯಕ್ಷ

ಸಿಸಿಬಿಯವರು ಸೈಲೆಂಟ್ ಸುನೀಲನ ಹುಡುಕುತ್ತಾ ಇದ್ದರೆ. ಅವನು ಬಿಜೆಪಿ ಮುಖಂಡರ ಜೊತೆಗೆ ಇದ್ದಾನೆ. ಆಡಳಿತ ಪಕ್ಷದ ಶಾಸಕರು, ಸಂಸದರು ಅವರ ಜೊತೆಗಿದ್ರೆ ಪೊಲೀಸರು ಹೇಗೆ ಅರೆಸ್ಟ್ ಮಾಡುತ್ತಾರೆ. ಕಾನೂನು ಕ್ರಮ ಕೈಗೊಳ್ಳೋಕೆ, ಶಿಕ್ಷೆ ಕೊಡಿಸೋಕೆ ಆಗುತ್ತಾ ? ಎಂದು ಪ್ರಶ್ನಿಸಿದರು.

ಮೊಹಮ್ಮದ್ ನಲಪಾಡ್ ಮೇಲೆ ಒಂದು ಕೇಸ್ ಇದೆ. ಆದರೆ, ಬಿಜೆಪಿ ನಾಯಕರ ಮೇಲೆ ಎಷ್ಟು ಕ್ರಿಮಿನಲ್ ಕೇಸ್‌ಗಳಿವೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, 'ಅಮಿತ್ ಶಾ ಅವರೇ ಕೊಲೆ ಪ್ರಕರಣದಲ್ಲಿ ಇದ್ದರು. ಅವರ ವಿರುದ್ಧ ಗಡಿಪಾರು ಆದೇಶವಿತ್ತು. ಹೀಗಾಗಿ ನಲಪಾಡ್ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಏನು ನೈತಿಕತೆ ಇದೆ' ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು