ಕಾಂಗ್ರೆಸ್ ರಾಜ್ಯಾಧ್ಯಕ್ಷ @DKShivakumar ಬಗ್ಗೆ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ.
ತಕ್ಕಡಿ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ.@DKShivakumar ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ.