ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಟಿ ರವಿಗೆ ಲೂಟಿ ರವಿ ಎಂದಿದ್ದು ಚೇಳು ಕಡಿದಂತಾಗಿದೆ: ದಿನೇಶ್ ಗುಂಡೂರಾವ್

Last Updated 13 ಸೆಪ್ಟೆಂಬರ್ 2022, 5:20 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ಸಿಟಿ ರವಿ–ಲೂಟಿ ರವಿ, ಸಿದ್ದು–ಪೆದ್ದು ವಾದ ವಿವಾದಗಳು ತಾರಕಕ್ಕೇರಿವೆ.

ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನೆರವಿಗೆ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಧಾವಿಸಿದ್ದಾರೆ.

‘ಸಿಟಿ ರವಿ ಅವರಿಗೆ'ಲೂಟಿ ರವಿ' ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ.ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಲೂಟಿ ರವಿ ಎನ್ನುತ್ತಾರೆ.ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಿಗೆ ಪ್ರದರ್ಶಿಸಿದ್ದಾರೆ’ ಎಂದು ಹರಿಹಾಯ್ದಿದ್ದಾರೆ.

‘ಸಿದ್ದರಾಮಯ್ಯ ಬಗ್ಗೆಅತ್ಯಂತ ತುಚ್ಛವಾಗಿ ಮಾತಾಡಿರುವಸಿಟಿ ರವಿತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ.ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ಸಿಟಿ ರವಿ ಸಾರ್ವಜನಿಕ ಜೀವನದಲ್ಲಿರುವವರು, ತಮ್ಮ ಘನತೆಗೆ ತಕ್ಕಂತೆ ಮಾತನಾಡಲಿ’ ಎಂದಿದ್ದಾರೆ.

‘ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿಟಿ ರವಿಗೂ ಈ ಚಟವಿದೆ‌.ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಈ ನಾಡಿಗೆ ತಿಳಿದಿದೆ.ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು? ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ.ಪುಂಡ– ಪೋಕರಿಯಂತೆ ಮಾತನಾಡಿದರೆ ಗೌರವ ಉಳಿಯುವುದಿಲ್ಲ’ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ಸಿಟಿ ರವಿ ಅವರು ‘ಸಿದ್ದರಾಮಯ್ಯ ಕಚ್ಚೇ ಹರುಕ, ಸಿದ್ದು–ಪೆದ್ದು’ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT