ಸೋಮವಾರ, ಮೇ 23, 2022
30 °C

ನಾನು ನಾಲ್ಕು ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ: ರಮೇಶ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ (ಸುವರ್ಣ ವಿಧಾನಸೌಧ): ‘ನಾನು ನಾಲ್ಕು ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ ಎಂದು ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌ ಹೇಳಿದರು.

ಸೋಮವಾರ ವಿಧಾನಸಭೆಯ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬಂದ ಅವರಿಂದ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಕುರಿತು ಪ್ರತಿಕ್ರಿಯೆ ಪಡೆಯಲು ಮಾಧ್ಯಮ ‍ಪ್ರತಿನಿಧಿಗಳು ಪ್ರಯತ್ನಿಸಿದರು. ಆಗ, ಅವರು ಹೀಗೆ ಪ್ರತಿಕ್ರಿಯಿಸಿದರು.

‘ಜೀವಂತ ಇರುವವರನ್ನು ಮಾತನಾಡಿಸಿ. ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ ಎಂದು ಕೈ ಮುಗಿದು ವಿಧಾನಸಭೆಯ ಮೊಗಸಾಲೆಯತ್ತ ನಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು