ಶನಿವಾರ, ಫೆಬ್ರವರಿ 27, 2021
30 °C

ರೈತರ ಆತ್ಮಹತ್ಯೆಗೆ ಕಾರಣವಾದ ಕಾಂಗ್ರೆಸ್‌ನಿಂದ ಕೃಷಿ ಕಾಯ್ದೆಗೆ ವಿರೋಧ: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂರು ಹೊಸ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ನಡೆಸುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಬಿಜೆಪಿ ಟ್ವಿಟ್ಟರ್‌ನಲ್ಲಿ ಟೀಕಿಸಿದೆ.

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್ ಪಕ್ಷವು ಪ್ರಧಾನಿ  ನರೇಂದ್ರಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ? ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದೆ.

3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ! ಎಂದು ಬಿಜೆಪಿ ಕುಟುಕಿದೆ.

2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ  ಕಾಂಗ್ರೆಸ್ ಘೋಷಿಸಿತ್ತು. ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಟ್ವಿಟ್ಟರ್‌ನಲ್ಲಿ ಕಿಡಿಕಾರಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು