ಕಾರವಾರ: ಕಾಂಗ್ರೆಸ್ ಪಕ್ಷವೇ ಭಯೋತ್ಪಾದಕ ಸಂಘಟನೆ. ಅವರ ತುಷ್ಟೀಕರಣ ನೀತಿಯಿಂದಲೇ ಮತೀಯ ಗಲಭೆಗಳು ನಡೆದಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಇಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಬಿಜೆಪಿ ಅವಧಿಯಲ್ಲಿ ಹಿಂದೂಗಳ ಅತಿ ಹೆಚ್ಚು ಹತ್ಯೆ ಆಗಿದೆ' ಎಂಬ ಸಿದ್ದರಾಮಯ್ಯ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.

'ಕಾಂಗ್ರೆಸ್ ಆಡಳಿತ ಮತೀಯ ಗಲಭೆಗೆ ಪ್ರೇರಣೆ ನೀಡಿತ್ತು. ಪಿ.ಎಫ್.ಐ. ಕಾರ್ಯಕರ್ತರನ್ನು ಜೈಲಿನಿಂದ ಸಿದ್ದರಾಮಯ್ಯ ಬಿಡುಗಡೆ ಮಾಡಿಸಿದ್ದರು. ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿತ್ತು' ಎಂದರು.

'ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವ ಹೊಂದಿರುವ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೆ ಜಾತಿ ಹೇಳಿಕೆ ನೀಡುತ್ತಿದ್ದಾರೆ' ಎಂದು ಲೇವಡಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.