ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮ್ಮದು ವಿಫಲ ನಾಯಕತ್ವ ಎಂದು ಒಪ್ಪಿಕೊಂಡ ಯಡಿಯೂರಪ್ಪ: ಕಾಂಗ್ರೆಸ್

ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಯಡಿಯೂರಪ್ಪ ಅವರು ತಮ್ಮ ಸರ್ಕಾರ ವೈಫಲ್ಯಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದೆ.

ರಾಜೀನಾಮೆ ಘೋಷಣೆ ಮಾಡುವ ಮೂಲಕ ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಬಿ.ಎಸ್‌.ಯಡಿಯೂರಪ್ಪಅವರು ಒಪ್ಪಿಕೊಂಡಂತಾಗಿದೆ.ಅವರೇ ಹೇಳಿಕೊಳ್ಳುವಂತೆ ಅವರದು ಸಮರ್ಥ ಆಡಳಿತವೇ ಆಗಿದ್ದಿದ್ದರೆ ಬಿಜೆಪಿಯು 'ಪದಚ್ಯುತಿ' ಮಾಡಿದ್ದೇಕೆ? ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದೆ.

ರಾಜ್ಯ ಬಿಜೆಪಿ ಸರ್ಕಾರವು ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಬಿಎಸ್‌ವೈ ಭಾವುಕರಾಗಿ ಮಾತನಾಡಿದ್ದರು. ಈ ವೇಳೆ ಅವರು, 75 ವರ್ಷ ವಯಸ್ಸಾದರೂ ನನಗೆ ಎರಡು ವರ್ಷ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ ಮತ್ತು ಬಿಜೆಪಿ ವರಿಷ್ಠರಿಗೆನಾನು ಚಿರ ಋಣಿ ಎಂದು ಕಣ್ಣೀರು ಹಾಕಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ʼಇದು 'ಪದತ್ಯಾಗ' ಅಲ್ಲ, 'ಪದಚ್ಯುತಿ' ಎನ್ನುವುದನ್ನು ಕಣ್ಣೀರು ಹೇಳುತ್ತಿದ್ದವುʼ ಎಂದು ಕುಟುಕಿದೆ.

ಮುಂದುವರಿದು, 'ಬಿಜೆಪಿಯ ದುರಾಡಳಿತದಿಂದ ಬೇಸತ್ತ ರಾಜ್ಯದ ಜನತೆ ಬಯಸುತ್ತಿರುವುದು ʼನಾಯಕತ್ವ ಬದಲಾವಣೆʼ ಅಲ್ಲ ʼಸರ್ಕಾರದ ಬದಲಾವಣೆʼ. ಬಿಜೆಪಿಗೆತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿʼ ಎಂದೂ ಸವಾಲು ಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT