ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆಯೂ 40 ಪರ್ಸೆಂಟ್ ಮಾತ್ರವೇ?: ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಗುತ್ತಿಗೆದಾರ ಸಂತೋಷ ಪಾಟೀಲ ಅನುಮಾನಾಸ್ಪದ ಸಾವಿನ ಪ್ರಕರಣ
ಅಕ್ಷರ ಗಾತ್ರ

ಬೆಂಗಳೂರು:ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ ಪಾಟೀಲ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ.

ಸಂತೋಷ ಸಾವಿನ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವಉಡುಪಿ ಇನ್‌ಸ್ಪೆಕ್ಟರ್‌ ಪ್ರಮೋದ್ ಕುಮಾರ್‌, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ.ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ.

ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ₹ 4 ಕೋಟಿ ವೆಚ್ಚದ ಕಾಮಗಾರಿ ಬಿಲ್ ಮಂಜೂರು ಮಾಡಲು ಈಶ್ವರಪ್ಪ 40 ಪರ್ಸೆಂಟ್ ಕಮಿಷನ್‌ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿದ್ದ ಸಂತೋಷ್, ಏ.12ರಂದು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮೃತಪಟ್ಟಿದ್ದರು.

ಈ ವಿಚಾರವಾಗಿ ಸಂತೋಷ್‌ ಸಂಬಂಧಿಗಳು ನೀಡಿದ್ದ ದೂರಿನಂತೆ ಸೆಕ್ಷನ್‌ 306, 334 ಅಡಿ ಈಶ್ವರಪ್ಪ (ಎ 1) ವಿರುದ್ಧ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.

ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ #ಬೊಂಬೆಬೊಮ್ಮಾಯಿ ಟ್ಯಾಗ್‌ ಹಾಕಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌,ಮಾಜಿ ಸಚಿವ ಈಶ್ವರಪ್ಪನವರಿಗೆ ಬಿ ರಿಪೋರ್ಟ್ ಸಲ್ಲಿಸಿದ ಸಿಐಡಿ ಎಷ್ಟು ಭಾರಿ ಈಶ್ವರಪ್ಪನವರ ವಿಚಾರಣೆ ನಡೆಸಿದೆ?ತಪ್ಪೇ ಮಾಡಿಲ್ಲ ಎಂದಾದರೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇಕೆ?ಈಶ್ವರಪ್ಪ ಕಿರುಕುಳವನ್ನೇ ಕೊಟ್ಟಿಲ್ಲ ಎಂದಾದರೆಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಬಸವರಾಜ ಬೊಮ್ಮಾಯಿ ಅವರೇಶೇ 40 ರಷ್ಟು ಮಾತ್ರವೇ ತನಿಖೆ ನಡೆಸಿದ್ದೀರಾ? ಎಂದು ಪ್ರಶ್ನಿಸಿದೆ.

ಸಂತೋಷ ಪತ್ನಿ ಆಕ್ರೋಶ
‘ನಮ್ಮ ಆತಂಕ ಕೊನೆಗೂ ನಿಜವೇ ಆಯಿತು. ನನ್ನ ಪತಿಯ ಸಾವಿಗೆ ಪ್ರಮುಖ ಕಾರಣರಾದ ಕೆ.ಎಸ್.ಈಶ್ವರಪ್ಪ ಅವರು ಪೊಲೀಸ್ ತನಿಖೆ ಮೇಲೆ ಪ್ರಭಾವ ಬೀರಿದ್ದಾರೆ. ಅವರ ಮೇಲೆ ‘ಬಿ’ ರಿಪೋರ್ಟ್ ಹಾಕಿಸಿಕೊಂಡಿದ್ದಾರೆ. ನನಗೆ ನ್ಯಾಯ ಸಿಗುವವರೆಗೂ ಸುಮ್ಮನಿರುವುದಿಲ್ಲ’ ಎಂದುಸಂತೋಷ ಪಾಟೀಲ ಅವರ ಪತ್ನಿ ರೇಣುಕಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪ ಅವರು ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪಾರದರ್ಶಕ ತನಿಖೆ ನಡೆಸಲು ಕ್ರಮವಹಿಸಬೇಕು ಎಂದು ಕೋರಿ ಅವರು ಶುಕ್ರವಾರವಷ್ಟೇ (ಜು. 15) ರಾಜ್ಯಪಾಲರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT