ಮಂಗಳವಾರ, ಜನವರಿ 18, 2022
22 °C

ಬಿಜೆಪಿ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಾಧ್ಯವೇ: ಕಾಂಗ್ರೆಸ್ ಪ್ರಶ್ನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಅನುದಾನ ಕೊಡದ, ಉಸ್ತುವಾರಿ ಸಚಿವರನ್ನು ನೇಮಕ ಮಾಡದ ಈ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನೀತಿ ಆಯೋಗದ ಬಡತನ ಸೂಚ್ಯಂಕದ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಓದಿ: 

‘ನೀತಿ ಆಯೋಗದ ಬಡತನ ಸೂಚ್ಯಂಕದ ವರದಿಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆ ಅತಿ ಬಡತನ ಹೊಂದಿರುವ ಅಂಶ ಬೆಳಕಿಗೆ ಬಂದಿದೆ. ಕಲಬುರ್ಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅತಿ ಹಿಂದುಳಿದಿವೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

‘ನರಿಗಳು ನ್ಯಾಯ ಹೇಳುವಂತಾಗದಿರಲಿ’: ‘ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಅವಧಿಯ ಟೆಂಡರ್‌ಗಳನ್ನು ತನಿಖೆ ಮಾಡುತ್ತೇವೆ ಎನ್ನುತ್ತಾರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಕಾಂಗ್ರೆಸ್ ಅವಧಿಯೂ ತನಿಖೆಯಾಗಲಿ, ಬಿಜೆಪಿ ಅವಧಿಯೂ ತನಿಖೆಯಾಗಲಿ. ಆದರೆ ನರಿಗಳು ನ್ಯಾಯ ಹೇಳುವಂತಾಗದೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಯಾಗಲಿ, 40 ಪರ್ಸೆಂಟ್ ಲೂಟಿ ಮಾಡಿದ ಕಳ್ಳರು ಯಾರೆಂದು ತಿಳಿಯಲಿ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು