ಮುಖ್ಯಮಂತ್ರಿ ಕಚೇರಿಯಿಂದ ಕಡತ ನಾಪತ್ತೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಮಹತ್ವದ ಕಡತವೊಂದು ಕಾಣೆಯಾಗಿದೆ. ಕಡತವನ್ನೇ ರಕ್ಷಿಸಲಾಗದವರು ರಾಜ್ಯವನ್ನು ರಕ್ಷಿಸಲು ಸಾಧ್ಯವೇ? ಎಂದು ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಕಡತ ನಾಪತ್ತೆ ವಿಚಾರವಾಗಿ #SayCM ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಹಾಗೂ ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದೆ.
ಮುಖ್ಯಮಂತ್ರಿಯವರ ಕಚೇರಿಯಿಂದ ಮಹತ್ವದ ಕಡತವೊಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ? ಕಚೇರಿಯು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ? ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ? ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ..
ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?
ಸಿಎಂ ಕಚೇರಿ @BSBommai ಅವರ ಹಿಡಿತದಲ್ಲಿ ಇಲ್ಲವೇ?
ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ?#saycm
— Karnataka Congress (@INCKarnataka) November 26, 2022
ಮುಖ್ಯಮಂತ್ರಿ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಬಂದಿದೆ. ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ. ಬೊಮ್ಮಾಯಿ ಅವರೇ, ಹನಿಟ್ರಾಪ್ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ? ಎಂದು ಪ್ರಶ್ನಿಸಿದೆ.
ಸಿಎಂ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಒದಗಿದೆ.
ಸಿಎಂ ಕಾರ್ಯದರ್ಶಿಯ ಹನಿಟ್ರಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ.@BSBommai ಅವರೇ, ಹನಿಟ್ರಾಪ್ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ?
— Karnataka Congress (@INCKarnataka) November 26, 2022
ಬೊಮ್ಮಾಯಿ ಅವರೇ, ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ? ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು 'ಯುಪಿ ಮಾಡೆಲ್' ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ? ಎಂದು ಛೇಡಿಸಿದೆ.
ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ @BSBommai ಅವರೇ,
ಇಲಿ ಕಚ್ಚಿಕೊಂಡು ಹೋಯಿತೇ?
ಹೆಗ್ಗಣ ಹೊತ್ತುಕೊಂಡು ಹೋಯಿತೇ?
ಗಾಳಿಯಲ್ಲಿ ಹಾರಿ ಹೋಯಿತೇ?ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು "ಯುಪಿ ಮಾಡೆಲ್" ಅಲ್ಲವೇ, ನೀವೂ ಅದೇ ಕಾರಣ ಕೊಡುವಿರಾ?
— Karnataka Congress (@INCKarnataka) November 26, 2022
ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸರ್ಕಾರ ಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ. ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಹೊರಟಿದೆ. ಬಿಜೆಪಿಯು ಶಾಸಕರ ಕಳ್ಳತನ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದ ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಎಂದು ಗುಡುಗಿದೆ.
ಸಂವಿಧಾನವನ್ನೇ ಬದಲಿಸಲು ಹೊರಟ @BJP4Karnataka ಮತದಾರರ ಮಾಹಿತಿ ಕಳ್ಳತನದ ಮೂಲಕ ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದೆ.
ಜನರ ಸಂವಿಧಾನದತ್ತವಾದ ಮತದಾನದ ಹಕ್ಕನ್ನೇ ಕಸಿದು ಪ್ರಜಾಪ್ರಭುತ್ವವನ್ನ ಹೈಜಾಕ್ ಮಾಡಲು ಹೊರಟಿದೆ.
ಶಾಸಕರ ಕಳ್ಳತನ, ಮತದಾರರ ಮಾಹಿತಿ ಕಳ್ಳತನ ಎಂಬ ಕ್ಷುದ್ರ ರಾಜಕಾರಣದಿಂದ
ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಬಿಜೆಪಿ.— Karnataka Congress (@INCKarnataka) November 26, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.