ಶುಕ್ರವಾರ, ನವೆಂಬರ್ 27, 2020
20 °C

ನಾಯಕತ್ವ ಗೊಂದಲ: ಗಾಂಧಿ ಕುಟುಂಬದ ಪರ ಎಸ್‌.ಆರ್. ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕತ್ವ ವಿಷಯದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಅವರು ಗಾಂಧಿ ಕುಟುಂಬದ ಪರ ನಿಂತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ, ‘ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ಅಪಾರವಾದ ತ್ಯಾಗ, ಬಲಿದಾನ ಮಾಡಿದ್ದಾರೆ. ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ್ದಾರೆ, ಅಲ್ಲದೆ, ದೀರ್ಘವಾದ ಸೆರೆವಾಸವನ್ನು ಅನುಭವಿಸಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಕಟ್ಟುವಲ್ಲಿಯೂ ಗಾಂಧಿ ಕುಟುಂಬದ ಕೊಡುಗೆ ಅಪಾರವಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು