ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಎರಡನೇ ದಿನದ ಪಾದಯಾತ್ರೆಗೆ ಚಾಲನೆ

Last Updated 28 ಫೆಬ್ರುವರಿ 2022, 6:41 IST
ಅಕ್ಷರ ಗಾತ್ರ

ರಾಮನಗರ: ಮೇಕೆದಾಟು ಎರಡನೇ ದಿನದ ಪಾದಯಾತ್ರೆಯು ಬಿಡದಿಯಿಂದ ಸೋಮವಾರ ಆರಂಭಗೊಂಡಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಉಪ‌ ಮುಖ್ಯಮಂತ್ರಿ‌ ಜಿ. ಪರಮೇಶ್ವರ ಸೇರಿದಂತೆ ಹಲವು ಮಂದಿ ನಾಯಕರು, ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ತುಮಕೂರು‌ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದಾರೆ. ಬಿಡದಿಯಿಂದ ಕೆಂಗೇರಿವರೆಗೆ 20 ಕಿ.ಮೀ ಉದ್ದಕ್ಕೆ ನಡಿಗೆ ಮುಂದುವರಿಯಲಿದ್ದು, ರಾಜಧಾನಿ ಬೆಂಗಳೂರು ಪ್ರವೇಶಿಸಲಿದೆ.

ಬಿಡದಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ‌ ಮಾತನಾಡಿದ ಶಿವಕುಮಾರ್, ಈ ದಿನ ಪಾದಯಾತ್ರೆ ಬೆಂಬಲಿಸಿ 40ಕ್ಕೂ ಹೆಚ್ಚು‌ ಮಠಾಧೀಶರೂ ಹೆಜ್ಜೆ ಹಾಕಲಿದ್ದಾರೆ ಎಂದರು.

ಸಂಚಾರ ಅಸ್ತವ್ಯಸ್ತ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪಾದಯಾತ್ರೆ ನಡೆದಿರುವ ಕಾರಣ ಎರಡನೇ ದಿನವೂ ಈ ಮಾರ್ಗದಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT