ಭಾನುವಾರ, ಸೆಪ್ಟೆಂಬರ್ 26, 2021
27 °C

ಕಾಂಗ್ರೆಸ್‌ನವರ ಕೂಸು ಹುಟ್ಟಲ್ಲ: ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕಾಂಗ್ರೆಸ್‌ನವರ ಕೂಸು ಹುಟ್ಟಲ್ಲ. ಕುಲಾಯಿ ಹೊಲಿಸುವ ಸಂದರ್ಭವೂ ಬರುವುದಿಲ್ಲ’.

– ಕಾಂಗ್ರೆಸ್‌ ಮುಖಂಡರ ನಡುವೆ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು ಹೀಗೆ.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೇರೆ ಪಕ್ಷದ ಬಗ್ಗೆ ಚರ್ಚೆ ಮಾಡುವುದು ಸೂಕ್ತ ಅಲ್ಲ. ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸುವುದು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದೆ’ ಎಂದರು.

ಇದನ್ನೂ ಓದಿ: 

‘ಉಳಿದಿರುವ ಅವಧಿಯಲ್ಲಿ ಇನ್ನೂ ಉತ್ತಮ ಆಡಳಿತ ಕೊಟ್ಟು ಜನಪ್ರಿಯತೆಯನ್ನು ಮತ್ತಷ್ಟು ಬೆಳೆಸಿಕೊಳ್ಳುತ್ತೇವೆ. 2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು