ಶುಕ್ರವಾರ, ಆಗಸ್ಟ್ 19, 2022
22 °C

ರೈತ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್‌ ಶಾಸಕರಿಂದ ಫ್ರೀಡಂ ಪಾರ್ಕ್‌ಗೆ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ತುರ್ತು ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಫ್ರೀಡಂ ಪಾರ್ಕ್‌ಗೆ ತೆರಳಿ ರೈತರ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಿಂದ ನೇರವಾಗಿ ಫ್ರೀಡಂ ಪಾರ್ಕ್‌ಗೆ ಕಾಲ್ನಡಿಗೆಯಲ್ಲಿ ಹೊರಟರು. ಅಲ್ಲದೆ, ರೈತ ಹೋರಾಟ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಕಾನೂನು ತಜ್ಞರಿಂದ ಸಲಹೆ ಪಡೆದ ಬಳಿಕ ಚುನಾವಣಾ ಆಯೋಗದ ಕದ ತಟ್ಟಲು ಕೂಡಾ ಶಾಸಕಾಂಗ ಪಕ್ಷದ ಸಭೆ ತೀರ್ಮಾನಿಸಲಾಗಿದೆ ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು