ಬೆಂಗಳೂರು: ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ (ಸೆ.27) ನಡೆಯಲಿರುವ ‘ಭಾರತ್ ಬಂದ್’ ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.

‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ’ ಎಂದು ಅವರು ದೂರಿದ್ದಾರೆ.

‘ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಠ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ’ ಎಂದು ಅವರು ಕಿಡಿಕಾರಿದ್ದಾರೆ.

‘ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಏಳು ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಪಕ್ಷ ಬೆಂಬಲಿಸಲಿದೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.