ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿ ಬದಲಿಗೆ ಪರೀಕ್ಷೆ ಬರೆದ ಕಾನ್‌ಸ್ಟೆಬಲ್‌

Last Updated 22 ನವೆಂಬರ್ 2020, 21:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯ ಸಶಸ್ತ್ರ ಮೀಸಲು ಪಡೆ ಪೊಲೀಸ್‌ ಹುದ್ದೆಯ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಬೇರೆ ಅಭ್ಯರ್ಥಿ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿ ಬಿದ್ದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗದ ಮಣಿಕಂಠ ಎಂಬುವವರ ಬದಲಾಗಿ, ಬೆಳಗಾವಿಯ ಅಂಕಲಗಿ ಪೊಲೀಸ್‌ ಠಾಣೆಯ ಸಿಬ್ಬಂದಿ ಅಡಿವೆಪ್ಪ ಯರಗುಪ್ಪಿ ಇಲ್ಲಿನ ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪರೀಕ್ಷೆ ಬರೆಯುತ್ತಿದ್ದರು. ಗೋಕುಲ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು.

ನಗರದ ವಿವಿಧ 12 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 11ಕ್ಕೆ ಪರೀಕ್ಷೆ ಆರಂಭವಾಗಿತ್ತು. ಆ ವೇಳೆ ರಾಯಬಾಗದ ಅಭ್ಯರ್ಥಿ ಹೆಸರಲ್ಲಿ ಅದೇ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಹುಬ್ಬಳ್ಳಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಕೇಶ್ವಾಪುರ ಠಾಣೆ ಇನ್‌ಸ್ಪೆಕ್ಟರ್‌ ಸುರೇಶ ಕುಂಬಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಕಲಿ ಅಭ್ಯರ್ಥಿಯನ್ನು ಪತ್ತೆ ಹಚ್ಚಲಾಗಿದೆ. ಗೋಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT