ಕರಾವಳಿಯಲ್ಲಿ ಮುಂದುವರಿದ ಧಾರಾಕಾರ ಮಳೆ: ಹಲವೆಡೆ ತಗ್ಗು ಪ್ರದೇಶಗಳು ಜಲಾವೃತ್ತ

ಮಂಗಳೂರು: ಸೋಮವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದ ಕೂಳೂರು, ರಥಬೀದಿ ರಸ್ತೆಗಳಲ್ಲಿ ನೀರು ನಿಂತಿದೆ.
ಕೂಳೂರಿನಲ್ಲಿ ಸೇತುವೆಯ ಗುಂಡಿಗಳನ್ನು ಮುಚ್ಚುವ ಕೆಲಸ ಆರಂಭಿಸಲಾಗಿದ್ದು, ಮಳೆಯಿಂದ ಗುಂಡಿಗಳಲ್ಲಿ ನೀರು ನಿಂತಿತ್ತು. ಇದರಿಂದ ಕೂಳೂರು ಬಳಿ ವಾಹನ ದಟ್ಟಣೆ ಹೆಚ್ಚಾಗಿತ್ತು.
ರಥಬೀದಿಯ ಮಹಾಮ್ಮಾಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ನೀರು ಸಂಗ್ರಹಗೊಂಡು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಪುತ್ತೂರು ತಾಲ್ಲೂಕಿನ ಕೋಡಿಬಾಂಡಿ ಸಮೀಪದ ಸೇಡಿಯಾಪು ಸೋಮವಾರ ಬೆಳಿಗ್ಗೆ ಬೃಹತ್ ಗಾತ್ರದ ಮರ ಬಿದ್ದು, ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸೇರಿದಂತೆ ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.