ಶುಕ್ರವಾರ, ಏಪ್ರಿಲ್ 23, 2021
28 °C

ಮೀಸಲಾತಿ ಕುರಿತಂತೆ ಸರ್ಕಾರದಿಂದ‌ ಸಂವಿಧಾನಾತ್ಮಕ ಕ್ರಮ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮೀಸಲಾತಿಗಾಗಿ ವಿವಿಧ ಸಮುದಾಯಗಳು ಬೇಡಿಕೆ ಇಡುತ್ತಿವೆ. ಸರ್ಕಾರ ಎಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಿದೆ.‌ ವೈಜ್ಞಾನಿಕ ಮತ್ತು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೀಸಲಾತಿ‌ ಶೇ 50 ಮೀರಬಾರದು ಎಂಬುದು ಸಂವಿಧಾನದ ಆಶಯವೂ ಆಗಿದೆ. ಅದಕ್ಕೆ ಅನುಗುಣವಾಗಿ, ಶೇ 50 ಪರಿಮಿತಿಯಲ್ಲಿ‌ ಅರ್ಹ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಲಾಗುವುದು ಎಂದರು.

ತಿರಸ್ಕರಿಸಿದರೂ ಬುದ್ಧಿ ಬಂದಿಲ್ಲ: ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಪುಣರು. ಕಾಂಗ್ರೆಸ್ ಗೆ ಸಮಾಜದ ಕಾಳಜಿ ಇಲ್ಲ. ಕೇವಲ ಒಲೈಕೆ ರಾಜಕಾರಣ ಮಾಡುತ್ತಿದೆ.‌ ಜನರು ತಿರಸ್ಕಾರ ಮಾಡಿದ್ದರೂ ಇನ್ನೂ ಬುದ್ಧಿ ಬಂದಿಲ್ಲ ಎಂದು‌ ಟೀಕಿಸಿದರು.

ಪಿಎಫ್ ಐ, ಎಸ್ ಡಿಪಿಐನ ಬಿಟೀಮ್ ಕಾಂಗ್ರೆಸ್. ಅವರ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧದ ಪ್ರಕರಣ ಹಿಂಪಡೆಯಲಾಗಿದೆ ಎಂದು ತಿರುಗೇಟು ನೀಡಿದರು.
ಪಿಎಫ್ಐ, ಎಸ್ ಡಿಪಿಐ ನಿಷೇಧಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕ್ರೋಡೀಕರಿಸಲಾಗುತ್ತಿದೆ. ಅವುಗಳ ಆಧಾರದಲ್ಲಿ ಈ ಸಂಘಟನೆಗಳನ್ನು ನಿ಼ಷೇಧಿಸಲಾಗುವುದು. ಈಗಾಗಲೇ ಮುಖ್ಯಮಂತ್ರಿ, ಗೃಹ ಸಚಿವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಿತ್ಯ ಪ್ರಯಾಣಿಕರಿಗೆ ತೊಂದರೆ ಬೇಡ:
ಕೇರಳದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯದ ಕುರಿತು ಪ್ರತಿಕ್ರಿಯಿಸಿದ ಅವರು, ನಿತ್ಯ ಬಂದು ಹೋಗುವವರಿಗೆ ತೊಂದರೆ ಆಗಬಾರದು. ಯಾರು ಇಲ್ಲಿಯೇ ಬಂದು‌ ಉಳಿದುಕೊಳ್ಳುತ್ತಾರೋ ಅಂಥವರಿಗೆ‌ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ಮಾಡಬೇಕು ಎಂದು ಡಾ.‌ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಆರೋಗ್ಯ ಸೇತು ಅ್ಯಪ್ ಮೂಲಕ ಟ್ರ್ಯಾಕಿಂಗ್ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಆರೋಗ್ಯ ಸಚಿವ‌ ಡಾ.ಸುಧಾಕರ ಜೊತೆಗೆ ಚರ್ಚಿಸುತ್ತೇನೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು