ಮಂಗಳವಾರ, ಮಾರ್ಚ್ 21, 2023
30 °C

ನ್ಯಾಯಾಂಗ ನಿಂದನೆ: ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಿ ನ್ಯಾಯಾಂಗ ನಿಂದನೆ ಮಾಡಿದ ಆರೋಪದಡಿ ರೈತರ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಬಿಡಿಎ ಎಂಜಿನಿಯರ್ ಆರ್‌.ಕೆ. ಮೋಹನ್ ದೂರು ನೀಡಿದ್ದರು. ಅದರನ್ವಯ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸುಪ್ರೀಂಕೋರ್ಟ್ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅಧ್ಯಕ್ಷತೆಯ ಸಮಿತಿಗೆ ದಾಖಲೆಗಳನ್ನು ನೀಡದಂತೆ ಕೋಡಿಹಳ್ಳಿ ಚಂದ್ರಶೇಖರ್ ಜನರಿಗೆ ಹೇಳಿ ದಿಕ್ಕು ತಪ್ಪಿಸಿದ್ದಾರೆ. ಈ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ. ಈ ಸಂಬಂಧ ಆರೋಪಿಗೆ ಈಗಾಗಲೇ ನೋಟಿಸ್ ಜಾರಿಯಾಗಿದೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು