ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣಾದಿಂದ ಸ್ಪರ್ಧೆ ವಿಚಾರ ವರಿಷ್ಠರ ವಿವೇಚನೆಗೆ: ವಿಜಯೇಂದ್ರ

Last Updated 24 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಮೈಸೂರು: ‘ವರುಣಾ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವ ಕುರಿತು ಅಮಿತ್‌ ಶಾ ಅವರೊಂದಿಗೆ ಚರ್ಚಿಸಿಲ್ಲ. ಸ್ಪರ್ಧೆ ಬಗ್ಗೆ ರಾಜ್ಯ, ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ‘ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ತಿಳಿಸಿದರು.

‘ಕಾರ್ಯಕರ್ತರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಮೋರ್ಚಾಗಳ ಸಮಾವೇಶದ ಸಂಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಅಮಿತ್‌ ಶಾ ಅವರು ಮನೆಗೆ ಉಪಾಹಾರಕ್ಕೆ ಬಂದಿದ್ದ ವೇಳೆ, ವರುಣಾ ಸೇರಿದಂತೆ ಕೆಲವು ಕ್ಷೇತ್ರಗಳ ಬಗ್ಗೆ ಗಂಭೀರವಾಗಿ ಚರ್ಚಿಸಿದರು. ಎಷ್ಟು ಜಿಲ್ಲೆಗಳಿಗೆ ಹೋಗಿದ್ದೀಯಾ ಎಂದು ಕೇಳಿದ್ದರು. ಆ ಬಗ್ಗೆ ವರದಿ ನೀಡಿರುವೆ. ಫಲಾನುಭಾವಿಗಳ ಸಮಾವೇಶ, ವಿಜಯಸಂಕಲ್ಪ ಯಾತ್ರೆ ಬಗ್ಗೆ ಅವರಿಗೆ ತೃಪ್ತಿ ಇದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT