ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಮುಂದುವರಿಕೆ

Last Updated 29 ಸೆಪ್ಟೆಂಬರ್ 2020, 21:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸೆ. 30ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ತುಮಕೂರು, ರಾಮನಗರ, ಮೈಸೂರು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಮುಂದುವರಿಸಲಾಗಿದೆ.

ಮುಂಗಾರು ಪ್ರಭಾವ ಕಡಿಮೆಯಾಗಿರುವುದರಿಂದ ಅ.1ರಿಂದ ರಾಜ್ಯದಾದ್ಯಂತ ಮಳೆ ತಗ್ಗಲಿದೆ. ಕರಾವಳಿ ಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ-ಎಲ್ಲಿ ಎಷ್ಟು?: ಮಡಿಕೇರಿ, ಭಟ್ಕಳದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಚಿಕ್ಕಮಗಳೂರು, ಹಾಸನ 2, ಹೊಳೆನರಸೀಪುರ, ಶ್ರೀರಂಗಪಟ್ಟಣ, ಮಳವಳ್ಳಿ, ಮಂಡ್ಯ ಹಾಗೂ ಕನಕಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT