ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ, ಮಲೆನಾಡು: ಮುಂದುವರಿದ ಮಳೆ

Last Updated 18 ಆಗಸ್ಟ್ 2020, 18:13 IST
ಅಕ್ಷರ ಗಾತ್ರ

ಮಂಗಳೂರು/ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ.

ಗಾಳಿ–ಮಳೆಗೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಮನೆ ಕುಸಿದು ಬಿದ್ದಿದೆ. ಕುಂದಾಪುರ ತಾಲ್ಲೂಕಿನ ಕೆಂಚನೂರು ಗ್ರಾಮದಲ್ಲಿ ಮನೆಗೆ ಭಾಗಶಃ ಹಾನಿಯಾಗಿದೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.

ಉತ್ತಮ ಮಳೆ:ಕೊಡಗು ಜಿಲ್ಲೆಯ ಮಡಿಕೇರಿ, ತಲಕಾವೇರಿ, ಭಾಗ ಮಂಡಲ, ನಾಪೋಕ್ಲು, ಕಕ್ಕಬ್ಬೆ, ಪಾರಾ ಣೆಯಲ್ಲಿ ಮಧ್ಯಾಹ್ನದ ಬಳಿಕ ಬಿರುಸಿನ ಮಳೆಯಾಗಿದೆ.ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ ಆಗಿದೆ. ಹೊಸನಗರ ತಾಲ್ಲೂಕಿನ ಬ್ರಹ್ಮೇಶ್ವರ ವೀರಭದ್ರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪಾರ್ವತಮ್ಮ ದೇವಿ ದೇವಸ್ಥಾನದ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ₹ 1 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿ ಸಲಾಗಿದೆ.

ಭಾರಿ ಮಳೆ ಸಾಧ್ಯತೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆ.19ರಿಂದ 23ರವರೆಗೆ ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರು ವುದರಿಂದ ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ-ಎಲ್ಲಿ,ಎಷ್ಟು?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಆಗುಂಬೆ 10, ಸುಬ್ರಹ್ಮಣ್ಯ 8, ಮೂಡುಬಿದರೆ, ಹೊಸನಗರ 7, ಸುಳ್ಯ, ಕೊಪ್ಪ 5, ಭಟ್ಕಳ, ಉಡುಪಿ, ಪುತ್ತೂರು, ಭಾಗಮಂಡಲ, ಚಿಕ್ಕ ಮಗಳೂರು 4, ಮಂಗಳೂರು 3, ಉಪ್ಪಿನಂಗಡಿ, ಅಂಕೋಲಾ, ಕಾರ ವಾರ, ಬೆಳಗಾವಿ, ಸೊರಬ, ಸಾಗರ, ಕಂಪ್ಲಿ, ಸೋಮವಾರಪೇಟೆ, ಗುಬ್ಬಿ, ತರೀಕೆರೆ, ಗೌರಿಬಿದನೂರು, ಶಿವಮೊಗ್ಗ 2, ನಿಪ್ಪಾಣಿ, ಶ್ರೀರಂಗಪಟ್ಟಣ, ಮದ್ದೂರು, ಮಂಡ್ಯ, ತುಮಕೂರು, ಶಿಡ್ಲಘಟ್ಟ, ದಾವಣಗೆರೆ, ದೇವನಹಳ್ಳಿ ಮತ್ತು ಚಿಂತಾಮಣಿಯಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT