ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತರಿಗೆ ನೆರವು ಮುಂದುವರಿಕೆ: ಬಿಎಸ್‌ವೈ ಭರವಸೆ

Last Updated 13 ಫೆಬ್ರುವರಿ 2021, 1:55 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಯನಿರತ ಪತ್ರಕರ್ತರು ಅನಾರೋಗ್ಯ ಅಥವಾ ಮೃತರಾದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಗರಿಷ್ಠ ₹5 ಲಕ್ಷ ನೆರವು ನೀಡುವುದನ್ನು ಮುಂದುವರಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಪತ್ರಕರ್ತರ ಕಲ್ಯಾಣಕ್ಕೆ
ಪೂರಕವಾದ ಬೇಡಿಕೆಗಳ ಈಡೇರಿಕೆ ವಿಚಾರವನ್ನು ಬಜೆಟ್‌ನಲ್ಲಿ ಸೇರ್ಪಡೆಗೊಳಿಸುವಂತೆ ಮನವಿ
ಮಾಡಿತು.

ವಿಜಯಪುರ ವಿಶ್ವವಿದ್ಯಾಲಯದಲ್ಲಿ ಹಿರಿಯ ಪತ್ರಕರ್ತರಾದ ಮೊಹರೆ ಹಣಮಂತರಾಯ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಚ್‌.ಎಸ್‌.ದೊರೆಸ್ವಾಮಿ ಮತ್ತು ಧಾರವಾಡ ವಿಶ್ವವಿದ್ಯಾಲಯದಲ್ಲಿ ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಪತ್ರಿಕೋದ್ಯಮ
ವಿಭಾಗದಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕೆಂಬ ಮನವಿಗೆ ಸ್ಪಂದಿಸಿದರು ಎಂದು ಸಂಘದ ಪ್ರಕಟಣೆ
ತಿಳಿಸಿದೆ.

ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿ ನೆರವು, ಬಸ್ ಪಾಸ್, ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT