ಬೆಂಗಳೂರು: ಜುಲೈ 26ರಂದು ಕೊಲೆಗೀಡಾದ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ ನೀಡಿ ಗುರುವಾರ ಆದೇಶ ಹೊರಡಿಸಲಾಗಿದೆ.

ಪ್ರವೀಣ್ ಪತ್ನಿಗೆ ತಮ್ಮ ಸಚಿವಾಲಯದಲ್ಲಿ ನೌಕರಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 10 ರಂದು ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನಾ ಸಮಾವೇಶದಲ್ಲಿ ಘೋಷಿಸಿದ್ದರು. ಅದರಂತೆಯೇ, ನೂತನಕುಮಾರಿ ಅವರಿಗೆ ಉದ್ಯೋಗ ನೀಡಲಾಗಿದೆ.

ಗುತ್ತಿಗೆ ಆಧಾರದಲ್ಲಿ ಸಹಾಯಕ (ಸಿ–ದರ್ಜೆ) ಹುದ್ದೆ ನೀಡಿದ್ದು, ₹30,350 ಸಂಚಿತ ವೇತನ ನಿಗದಿಪಡಿಸಲಾಗಿದೆ. ಅವರ ಅಂಕಪಟ್ಟಿ ಮತ್ತು ಇತರ ಶೈಕ್ಷಣಿಕ ದಾಖಲೆಗಳ ನೈಜತೆ ಪರಿಶೀಲನೆಯನ್ನು ಸಂಬಂಧಿಸಿದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳ ಮೂಲಕ ಎರಡು ತಿಂಗಳೊಳಗೆ ಪರಿಶೀಲನೆ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.