ಬುಧವಾರ, ಮಾರ್ಚ್ 22, 2023
26 °C
ಉಣಕಲ್ಲದ ಸಿದ್ದಪ್ಪಜನವರ ಮೂಲ ಗದ್ದುಗೆಯ ಮಠಕ್ಕೆ ಭೇಟಿ

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಬಸವರಾಜ ಬೊಮ್ಮಾಯಿ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಈ ಬಾರಿಯ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ನಗರದ ಉಣಕಲ್ಲದ ಸಿದ್ದಪ್ಪಜನವರ ಜಾತ್ರೆ ಅಂಗವಾಗಿ ಮೂಲ ಗದ್ದುಗೆಯ ಮಠಕ್ಕೆ ಭಾನುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಸಿದ್ಧಪಡಿಸುವ ಕುರಿತು ವಿವಿಧ ಇಲಾಖೆಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯಕ್ಕೆ ಅತ್ಯುತ್ತಮ ಬಜೆಟ್ ನೀಡಲಾಗುವುದು ಎಂದರು.

ಚಿಕ್ಕಂದಿನಿಂದಲೂ ನಾನ ಸಿದ್ದಪ್ಪಜ್ಜನ ದೇವಸ್ಥಾನಕ್ಕೆ ಬರುತ್ತಿದೆ. ಇವತ್ತು ಜಾತ್ರೆ ಇರುವ ಹಿನ್ನೆಲೆಯಲ್ಲಿ ಅಜ್ಜನ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಮಹಾನಗರ‌ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ ಹಾಗೂ ಸ್ಥಳೀಯ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು