ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ಕಾಯ್ದೆ ಪ್ರಶ್ನಿಸಿದ ಪಿಐಎಲ್: ಸರ್ಕಾರಕ್ಕೆ ನೋಟಿಸ್

Last Updated 22 ಜುಲೈ 2022, 16:07 IST
ಅಕ್ಷರ ಗಾತ್ರ

ಬೆಂಗಳೂರು: ಬಲವಂತದ ಮತಾಂತರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ದೆಹಲಿಯ, ‘ಇವಾನಲಿಕಲ್ ಫೆಲೋಶಿಪ್ ಆಫ್ ಇಂಡಿಯಾ’ ಮತ್ತು ‘ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯುಮನ್ ರೈಟ್ಸ್ ಸಂಸ್ಥೆ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿಗೆ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

‘ಈ ಕಾಯ್ದೆಯು, ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಸಂವಿಧಾನದ 25ನೇ ವಿಧಿ ಮತ್ತು ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ಆದಿತ್ಯ ಸೋಂಧಿ ಹಾಗೂ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.

‘2022ರ ಮೇ 17ರಿಂದ ಜಾರಿಗೆ ಬಂದಿರುವ ಸುಗ್ರೀವಾಜ್ಞೆ ಅಡಿಯಲ್ಲಿ ಯಾರ ವಿರುದ್ಧವೂ ಕ್ರಮ ಕೈಗೊಳ್ಳದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT