ಚಿಕ್ಕಮಗಳೂರು/ಬಸವಕಲ್ಯಾಣ/ಶಿವಮೊಗ್ಗ:ಬಾಳೆಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮಂಗಳವಾರ ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದಾರೆ.
ಸ್ವಾಮೀಜಿಗೆ ಸೋಮವಾರ ಜ್ವರ ಕಾಣಿಸಿಕೊಂಡಿತ್ತು. ಪಟ್ಟಣದ ಆರೋಗ್ಯ ಕೇಂದ್ರದ ವೈದ್ಯರು ಮಂಗಳವಾರ ಮಾದರಿ ಪರೀಕ್ಷೆ ಮಾಡಿದ್ದು, ಕೊರೊನಾ ಸೋಂಕು ಖಾತರಿಯಾಗಿದೆ.
‘ಜ್ವರಕ್ಕೆ ಚಿಕಿತ್ಸೆ ಪಡೆದಿದ್ದು ಕಡಿಮೆಯಾಗಿದೆ. ಲಕ್ಷಣಗಳು ಇಲ್ಲ, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗುತ್ತೇನೆ’ ಎಂದು ರಂಭಾಪುರಿಶ್ರೀ ‘ಪ್ರಜಾವಾಣಿ’ಗೆ ತಿಳಿಸಿದರು.
ಈಶ್ವರಪ್ಪಗೆ ಕೋವಿಡ್
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ.
ಸೋಮವಾರ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಶೀತ ಕಾಣಿಸಿಕೊಂಡ ಕಾರಣ ಗಂಟಲುದ್ರವ ಪರೀಕ್ಷೆಗೆ ಕಳುಹಿಸಿದ್ದರು. ವರದಿ ಪಾಸಿಟಿವ್ ಬಂದ ತಕ್ಷಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
‘ನನಗೆ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುವೆ. ಎಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗುವೆ’ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ಪತ್ತೆಯಾಗಿದೆ. ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ಗೆಕೋವಿಡ್
ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ಗೆ ಕೋವಿಡ್ ದೃಢಪಟ್ಟಿದೆ. ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದ್ದರಿಂದ ಪರೀಕ್ಷೆಗೊಳಗಾಗಿದ್ದರು. ವರದಿ ಪಾಸಿಟಿವ್ ಬಂದಿದೆ. ಕೆಲ ದಿನಗಳಿಂದ ಸಂಪರ್ಕದಲ್ಲಿದ್ದವರು ಜಾಗರೂಕರಾಗಿರಬೇಕು ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.