ಕುಕ್ಕರ್ ಬಾಂಬ್ ಸ್ಫೋಟ: ಆರೋಪಿ ವಿಚಾರಣೆ ಶುರು
ಮಂಗಳೂರು: ನಗರದ ಗರೋಡಿಯಲ್ಲಿ ನ.19ರಂದು ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬುಧ
ವಾರ ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಂಬ್ ಸ್ಫೋಟದಿಂದ ಆರೋಪಿಯ ದೇಹದ ಶೇ 45ರಷ್ಟು ಭಾಗದಲ್ಲಿ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲು ವೈದ್ಯರ ತಂಡ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಎನ್ಐಎ ಅಧಿಕಾರಿಗಳ ತಂಡವು ನಗರಕ್ಕೆ ಬಂದಿದೆ. ಆರೋಪಿಯನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವಿ
ನಿಂದ ಕೆಲ ಕಾಲ ವಿಚಾರಣೆಗೆ ಒಳಪಡಿ
ಸಿದೆ’ ಎಂದು ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.