ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೋನಾ ವೈರಸ್ ತಡೆಯಲು ಸಹಕರಿಸಿ: ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

Last Updated 22 ಡಿಸೆಂಬರ್ 2020, 15:49 IST
ಅಕ್ಷರ ಗಾತ್ರ

ಬೆಂಗಳೂರು: ಬ್ರಿಟನ್ನಿನಲ್ಲಿ ರೂಪಾಂತರಗೊಂಡ ಹೊಸ ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗಾಗಿ, ವೈರಸ್ ತಡೆಯುವ ನಿಟ್ಟಿನಲ್ಲಿ ಸಹಕರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಕೊರೋನಾ ರೂಪಾಂತರ ಹರಡದಂತೆ ತಡೆಯಲು, ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೆ ತಪಾಸಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ವೈರಸ್ ಹರಡದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸಹಕರಿಸಿ ಎಂದು ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಬ್ರಿಟನ್ನಿನ ಹೊಸ ವೈರಸ್ ಆತಂಕದ ಹಿನ್ನೆಲೆಯಲ್ಲಿ ಯೂರೋಪಿನ ಹಲವು ದೇಶಗಳಲ್ಲಿ ಬ್ರಿಟನ್ನಿನಿಂದ ಬರುವ ವಿಮಾನಗಳನ್ನು ರದ್ದು ಮಾಡಲಾಗಿದೆ. ಭಾರತವೂ ಸಹ ಬ್ರಿಟನ್ನಿನಿಂದ ಬರುವ ಮತ್ತು ಹೋಗುವ ವಿಮಾನಗಳನ್ನು ಡಿ. 31ರವರೆಗೆ ತಡೆ ಹಿಡಿದಿದೆ. ಬೆಂಗಳೂರು ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೆ ಹೆಲ್ಪ್ ಡೆಸ್ಕ್ ಆರಂಭಿಸಲಾಗಿದ್ದು, ಬ್ರಿಟನ್ನಿನಿಂದ ಆಗಮಿಸುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಕಳೆದ 14 ದಿನಗಳಲ್ಲಿ ಬೆಂಗಳೂರಿಗೆ ಬಂದಿರುವವರ ಮಾಹಿತಿ ಕಲೆಹಾಕಲಾಗಿದ್ದು, ಅವರ ಪರೀಕ್ಷೆಗೂ ಕ್ರಮಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT