ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಕಾರ ಸಂಘಗಳ 5 ವಾರ್ಷಿಕ ಮಹಾಸಭೆಗಳಲ್ಲಿ 3 ಸಭೆಗೆ ಗೈರಾದರೆ ಮತದಾನದ ಹಕ್ಕಿಲ್ಲ

Last Updated 1 ಅಕ್ಟೋಬರ್ 2021, 17:38 IST
ಅಕ್ಷರ ಗಾತ್ರ

ಬೆಂಗಳೂರು: ಸಹಕಾರ ಸಂಘಗಳ ಐದು ವಾರ್ಷಿಕ ಮಹಾಸಭೆಗಳಲ್ಲಿ ಕನಿಷ್ಠ 3 ಸಭೆಗಳಿಗೆ ಗೈರಾಗುವ ಮತ್ತು ಸತತ ಮೂರು ವರ್ಷ ಸಂಘದ ಕನಿಷ್ಠ ಸೇವೆಯನ್ನು ಬಳಸಿಕೊಳ್ಳದ ಸದಸ್ಯರು ಸಂಘದ ಚುನಾವಣೆಯಲ್ಲಿ ಮತದಾನದ ಹಕ್ಕು ಕಳೆದುಕೊಳ್ಳಲಿದ್ದಾರೆ.

ಸಹಕಾರ ಸಂಘಗಳ ಕಾಯ್ದೆ –1959ಗೆ ತಿದ್ದುಪಡಿ ಮೂಲಕ ಸೆಕ್ಷನ್ 20(ಎ) ಸೇರ್ಪಡೆ ಮಾಡಿರುವ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಸೆಕ್ಷನ್ 20(ಎ) ಪ್ರಕಾರ ಈ ನಿಯಮ ಜಾರಿಯಾಗಲಿದೆ.

ತಿದ್ದುಪಡಿ ಪ್ರಶ್ನಿಸಿ ವಿವಿಧ ಸಹಕಾರ ಸಂಘಗಳ ಸದಸ್ಯರು ಸಲ್ಲಿಸಿದ್ದ ನೂರಾರು ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ತಿದ್ದುಪಡಿ ಮಾಡಿದ ಎರಡೂ ನಿಬಂಧನೆಗಳು 2021ರ ಆಗಸ್ಟ್‌ 4ರ ನಂತರ ನಡೆಯುವ ಚುನಾವಣೆಗಳಿಗೆ ಅನ್ವಯವಾಗುತ್ತವೆ ಎಂದು ಹೇಳಿದೆ.

ತಿದ್ದುಪಡಿ ತಂದು ಐದು ವರ್ಷವಾದರೂ ಜಾರಿಗೆ ತಾರದಿರುವುದನ್ನು ಗಮನದಲ್ಲಿಟ್ಟುಕೊಂಡು ಸದಸ್ಯರಿಗೆ ಮತದಾನ ಮಾಡಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ಅನುಮತಿ ನೀಡಿತ್ತು.

ತಡಕಲ್ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮತ್ತು ರಾಜ್ಯ ಸರ್ಕಾರ ನಡುವಿನ ಪ್ರಕರಣದಲ್ಲಿ ತಿದ್ದುಪಡಿಯನ್ನು ನ್ಯಾಯಾಲಯ ಈಗಾಗಲೇ ಎತ್ತಿ ಹಿಡಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT