ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ

Last Updated 17 ಅಕ್ಟೋಬರ್ 2021, 7:29 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ.

'ಕನ್ಯ್ಪೂಜ್ ಆಗಬೇಡಿ...! ಇದು ಹಿಂದೂ ಸಂಘಟನೆ ಬೈಟಕ್ ಅಲ್ಲ. ಇದು ನಮ್ಮ ಪೊಲೀಸರ ತಂಡ. ಜೈ ಶ್ರೀರಾಮ್...' ಎಂಬ ಸಾಲುಗಳೊಂದಿಗೆ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿ ಹಿಂದೂ ಸಂಘಟನೆಯ ಮುಖಂಡರಂತೆ ಧಿರಿಸು ತೊಟ್ಟಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ.

ಈ ಕುರಿತು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಆಯುಧಪೂಜೆ ನಿಮಿತ್ತ ಪೊಲೀಸ್ ಠಾಣೆಗಳಲ್ಲಿ ಮೊದಲಿನಿಂದಲೂ ಶಸ್ತ್ರಾಸ್ತ್ರ ಗಳಿಗೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಆ ಪ್ರಕಾರ ಅಂದು ಗ್ರಾಮೀಣ ಠಾಣೆಯಲ್ಲೂ ಪೂಜೆ ನಡೆಯಿತು.ಈ ಕಾರ್ಯಕ್ರಮದಲ್ಲಿ ನಾನೂ ಪಾಲ್ಗೊಂಡಿದ್ದೇನೆ. ಇದರಲ್ಲಿ ತಪ್ಪೇನಿಲ್ಲ ಎಂದರು.

ನಾಳೆ ಮುಸ್ಲಿಮರು ಕರೆದರೂ ಹೋಗುವೆ, ನಮಾಜ್ ಮಾಡುವೆ. ನಾನು ಯಾವುದೇ ಆಚರಣೆ ವಿರೋಧಿಯಲ್ಲ ಎಂದು ಸ್ಪಷ್ಟನೆ ನೀಡಿದರು.

ಹಿಂದೂ ಸಂಘಟನೆಗಳ ಮುಖಂಡರಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಧಿರಿಸು ತೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT