ಸೋಮವಾರ, ಮಾರ್ಚ್ 8, 2021
22 °C

ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಉತ್ತರ ‌ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ‌ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು.

ನಗರದ ಡಿಎಆರ್ ಮೈದಾನದಲ್ಲಿ ‌ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ ಬೇಡಿಕೆ ಯಾಗಿತ್ತು. ಅದನ್ನು ‌ಈಗ ಈಡೇರಿಸ ಲಾಗುತ್ತಿದೆ. ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿ ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ 4.46 ಕೋಟಿ ಜನರಿಗೆ ಪಡಿತರ ಚೀಟಿಗಳನ್ನು ವಿತರಿಸಲಾ ಗಿದ್ದು, 3 ಲಕ್ಷ ಚೀಟಿಗಳನ್ನು ಹೊಸದಾಗಿ ವಿತರಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು