ಗುರುವಾರ , ಮೇ 6, 2021
23 °C

ರೆಮ್‌ಡಿಸಿವಿರ್‌: ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಔಷಧಿ ಹಾಗೂ ಚುಚ್ಚುಮದ್ದುಗಳನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ದುಬಾರಿ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ರಾಜ್ಯದ ಎಲ್ಲ ಕಮಿಷನರ್ ಹಾಗೂ ಜಿಲ್ಲಾ ಎಸ್ಪಿಗಳಿಗೆ ಸುತ್ತೋಲೆ ಪ್ರತಿ ಕಳುಹಿಸಲಾಗಿದೆ.

‘ಕಾಳಸಂತೆಯಲ್ಲಿ ಔಷಧಿ ಹಾಗೂ ಚುಚ್ಚುಮದ್ದು ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಠಾಣಾಧಿಕಾರಿಗಳು ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು. ಮಾಹಿತಿ ಇದ್ದರೆ ಗೌಪ್ಯ ತಪಾಸಣೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಬೇಕು. ಇಂಥ ಪ್ರಕರಣಗಳಲ್ಲಿ ಕೈಗೊಂಡ ಕ್ರಮದ ಬಗ್ಗೆ ಮುಖ್ಯ ಕಚೇರಿಗೆ ವರದಿ ಕಳುಹಿಸಬೇಕು’ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.