ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಕಾರ್ಯಪಡೆ ಪುನಾರಚನೆ: ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷ

Last Updated 3 ಮೇ 2021, 9:18 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್‌ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಲೋಕೋಪಯೋಗಿ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು.

ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ. ಅಶ್ವತ್ಥನಾರಾಯಣ ಜತೆಯಲ್ಲಿ ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ಸುರೇಶ್‌ ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ. ಪಾಟೀಲ್‌ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್‌ ಇದ್ದಾರೆ.

ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ‌, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT